Thursday, October 30, 2025

ಹಾಸಿಗೆ, ದಿಂಬು ಕೊಟ್ಟುಬಿಡಿ.. ದರ್ಶನ್ ಮನವಿಗೆ ಗ್ರೀನ್ ಸಿಗ್ನಲ್ ಕೊಡುತ್ತಾ ಕೋರ್ಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ.

ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ನಟ ದರ್ಶನ್ ಪರ ವಕೀಲರು ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ಎಸ್ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸುನೀಲ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅ.9ಕ್ಕೆಆದೇಶವನ್ನು ಕಾಯ್ದಿರಿಸಿದೆ.

error: Content is protected !!