ಕಳಸಾ-ಬಂಡೂರಿ ಯೋಜನೆಗೆ ಶೀಘ್ರ ಅನುಮೋದನೆ ನೀಡಿ: ಪಿಎಂಗೆ ಸಿಎಂ ಸಿದ್ದು ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ನಿನ್ನೆ ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯಯನವರು ಜನ್ಮದಿನದ ಶುಭಾಶಯ ತಿಳಿಸಿ ನಾಲಾ ಯೋಜನೆಯ ಬಗ್ಗೆ ವಿವರವಾಗಿ ಬರೆದಿದ್ದಾರೆ.

ನಿಮ್ಮ ಜನ್ಮದಿನಕ್ಕೆ ಶುಭಾಶಯಗಳು, ನಿಮಗೆ ಭಗವಂತ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ನೀಡಲಿ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ನಿಮ್ಮ ತುರ್ತು ಗಮನಕ್ಕೆ ತರಲು ನಾನು ಈ ಪತ್ರ ಬರೆಯುತ್ತಿದ್ದೇನೆ ಎಂದು ಆರಂಭಿಸಿದ್ದಾರೆ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!