ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಸೋಮವಾರಪೇಟೆ:
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭಾನುವಾರ ಸೋಮವಾರಪೇಟೆಯ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿಯೊಬ್ಬರಿಗೂ ಆರೋಗ್ಯ ಸೇವೆಗಳು ಲಭ್ಯವಾಗಬೇಕು. ದಿನದ 24 ಗಂಟೆಯೂ ವೈದ್ಯಾಧಿಕಾರಿಗಳು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತುರ್ತು ಆರೋಗ್ಯ ಸ್ಪಂದನೆ ದೊರೆಯಬೇಕು ಎಂದು ಸಚಿವರು ಸೂಚಿಸಿದರು.
ಪಡಿತರ ಚೀಟಿ ಇಲ್ಲದ ಕುಟುಂಬಕ್ಕೂ ಆಹಾರ ಪೂರೈಸುವಂತೆ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.
ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಡಿಎಚ್ಒ ಡಾ.ಮೋಹನ್, ತಹಶೀಲ್ದಾರ್ ಗೋವಿಂದರಾಜು, ಡಿವೈಎಸ್ಪಿ ಶೈಲೇಂದ್ರ ಇದ್ದರು.