ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾಡೆಲ್ ಉರ್ಫಿ ಜಾವೇದ್ (Urfi Javed) ತಮ್ಮ ವಿಭಿನ್ನ ಉಡುಗೆ ತೊಡುಗೆಗಳ ಮೂಲಕ ಸುದ್ದಿಯಲ್ಲಿದ್ದು, ಈಗಾಗಲೇ ಅನೇಕ ಮುಂಬೈ ಪೊಲೀಸರು ಕೂಡ ಎಚ್ಚರಿಕೆಯನ್ನು ನೀಡಿದ್ದಾರೆ.
ಇದೀಗ ಅವರ ಭದ್ರತೆ ಮತ್ತು ಅವರ ಬೇಡಿಕೆಯನ್ನು ಪರಿಶೀಲಿಸುವಂತೆ ಮುಂಬೈ (Mumbai)ಪೊಲೀಸ್ ಕಮಿಷನರ್ ಗೆ (Commissioner) ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ.
ಪತ್ರದಲ್ಲಿ ಉರ್ಫಿ ಜಾವೇದ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಹಿಳಾ ಆಯೋಗ ಅಧ್ಯಕ್ಷೆ ರೂಪಾಲಿ ಚಂಕಕರ್ (Rupali Chankakar) ತಿಳಿಸಿದ್ದಾರೆ.
ಮೊನ್ನೆಯಷ್ಟೇ ನಟಿ ಉರ್ಫಿ ಜಾವೇದ್ ಚಿತ್ರಾ ಕಿಶೋರ್ ವಾಘ್ ಮೇಲೆ ಆರೋಪ ಮಾಡಿ , ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಕೀಲರ ಮೂಲಕ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದರು.
ನಟಿ ಉರ್ಫಿ ಜಾವೇದ್ ಮಹಿಳೆಯರ ಮಾನ ಹರಾಜು ಹಾಕುವಂತಹ ಬಟ್ಟೆಗಳನ್ನು ಹಾಕುತ್ತಾರೆ. ಅಶ್ಲೀಲ ಹಾಗೂ ಅಸಭ್ಯವಾಗಿ ನಡೆದುಕೊಡುತ್ತಾರೆ. ಇಂತಹ ನಟಿಯ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಚಿತ್ರಾ ಅವರು ಕೆಲ ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಉರ್ಫಿ ಮಹಿಳಾ ಆಯೋಗಕ್ಕೆ ಮೊರೆ ಹೋಗಿದ್ದರು.