Wednesday, August 17, 2022

Latest Posts

ಕೋರೋನಾ ನಿಯಂತ್ರಿಸುವಲ್ಲಿ ಪೋಲಿಸ್ ಇಲಾಖೆಗೆ ಸಂಪೂರ್ಣ ಅಧಿಕಾರ ನೀಡಿ: ತೆಗನೂರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ವರದಿ,ಕಲಬುರಗಿ:

ಸೆಮಿ ಲಾಕ್ ಡೌನ್ ಇಂದಿನಿಂದ ಪ್ರಾರಂಭವಾಗಿದ್ದು , ಜನರನ್ನು ರಸ್ತೆಗೆ ಇಳಿಯದಂತೆ ಮಾಡುವಲ್ಲಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಇದರ ಜೊತೆಗೆ ರಸ್ತೆಗಿಳಿದ ಜನರಿಗೆ ಬಿಸಿ ಬಿಸಿ ಕಜ್ಜಾಯದ ಊಟವನ್ನು ನೀಡುತ್ತಿದ್ದಾರೆ.ಇದನ್ನು ಗಮನಿಸಿದ ಕೆಲ ರಾಜಕಾರಣಿಗಳು ಟ್ವೀಟ್ ಮಾಡಿ ಪೋಲಿಸರು ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಳ್ಳಿತ್ತಿದ್ದಾರೆ.
ಇಂತಹ ಸಂದರ್ಭಗಳಲ್ಲಿ ಮಾನವ ಹಕ್ಕುಗಳನ್ನು ಮೀರಿದರೆ ಮಾತ್ರ ಜನರನ್ನು ರಸ್ತೆಗಿಳಿಯದಂತೆ ಕಂಟ್ರೋಲ್ ಮಾಡಲು ಸಾಧ್ಯ ಎಂದು ಕರ್ನಾಟಕ ರಕ್ಷಣಾ ವೇದಿಕೆ( ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ತೆಗನೂರ ಮನವಿ ಮಾಡಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ಹಾಗೂ ಜೆಡಿಎಸ್ ರಾಜ್ಯಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿಯವರು ಮಾನವ ಹಕ್ಕುಗಳು ಪೋಲೀಸರಿಂದ ಉಲ್ಲಂಘನೆ ಆಗುತ್ತಿದೆ ಎಂದು ಟ್ವೀಟ್ ರ ಮೂಲಕ ಆರೋಪ ಮಾಡುತ್ತಿದ್ದಾರೆ. ಮೊದಲು ಆರೋಪವನ್ನು ಮಾಡುವುದನ್ನು ಅವರು ನಿಲ್ಲಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಲಾಟಿ ಹಿಡಿದು ಪೋಲಿಸರು ಜನರನ್ನು ಕಂಟ್ರೋಲ್ ಮಾಡದಿದ್ದರೆ ಮೂರನೇ ಹಂತದ ಕೊರೊನಾವನ್ನು ಕರ್ನಾಟಕ ರಾಜ್ಯದಲ್ಲಿ ಜನರನ್ನು ತಲ್ಲಣಗೊಳಿಸುತ್ತದಾರೆ.
ಈ ಸೆಮಿ ಲಾಕ್ ಡೌನ್ ನಲ್ಲಿ ಸಂಪೂರ್ಣ ಅಧಿಕಾರವನ್ನು ಪೊಲೀಸರಿಗೆ ನೀಡಬೇಕು ಹಾಗೂ ಎಲ್ಲಾ ಪಕ್ಷದ ರಾಜಕಾರಣಿಗಳು, ಸಾರ್ವಜನಿಕರು ಸಹಕಾರ ನೀಡಿದರೆ ಪೋಲೀಸರು ಕೊರೊನಾವನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಅವರು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!