ವಯನಾಡಿಗೆ 100 ಮನೆಗಳು ನೀಡುತ್ತಿರುವುದು ರಾಜಕೀಯ ಗುಲಾಮಗಿರಿಯ ಸಂಕೇತ: ಸಿ.ಟಿ.ರವಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡಿನಲ್ಲಿ 100 ಮನೆಗಳನ್ನು ನೀಡಲು ಮುಂದಾಗಿರುವ ಸಿದ್ದರಾಮಯ್ಯನವರ ಕ್ರಮ ರಾಜಕೀಯ ಗುಲಾಮಗಿರಿಯ ಸಂಕೇತವಾಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.

ದತ್ತ ಜಯಂತಿಯ ಮೊದಲ ದಿನ ನಗರದ ಬೋಳರಾಮೇಶ್ವರ ದೇವಸ್ಥಾನದ ಬಳಿ ಅನುಸೂಯ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಹಂತದಲ್ಲಿ ಸಿದ್ದರಾಮಯ್ಯ ಅವರು ಕೇರಳದ ವಯನಾಡಿನಲ್ಲಿ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಬರೆದಿರುವ ಪತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇಡೀ ಅಖಂಡ ಭಾರತ ಒಂದು. ಇಡೀ ಜಗತ್ತೇ ಒಂದು ಮನೆ ಎಂಬ ಉದಾತ್ತ ಮನೋಭಾವ ನಮ್ಮದು. ನಿಮ್ಮ ನೆರೆಯವರಿಗೆ ಸಹಾಯ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಮಾತ್ರ ವಸತಿ ವ್ಯವಸ್ಥೆ ಮಾಡಿರುವುದು ರಾಜಕೀಯ ಗುಲಾಮಗಿರಿಯ ಸಂಕೇತ ಎಂದು ಅವರು ತೀವ್ರವಾಗಿ ಖಂಡಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!