ದೇಶದ ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಮರತೂರಕರ್

ಹೊಸ ದಿಗಂತ ವರದಿ, ಕಲಬುರಗಿ:

ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟರ್ ನೀಡಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ತಿಳಿಸಿದ್ದಾರೆ.

ಬಜೆಟ್ ನಲ್ಲಿ ರೈತರಿಗೆ, ವ್ಯಾಪಾರಸ್ಥರಿಗೆ ಹಾಗೂ ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆ‌ ನೀಡಿದ್ದು, ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್ ನಲ್ಲಿ ಉತ್ತೇಜನ ನೀಡಲಾಗಿದೆ ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಡವಾಗಿಸಲು ಬಜೆಟ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಇದಲ್ಲದೇ ಸೌರ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಆದ್ಯತೆ ಕೊಟ್ಟಿರುವುದು, ಹೊಸ ಕಂಪನಿಗಳಿಗೆ ತೆರಿಗೆ ವಿನಾಯಿತಿ, ದೇಶದಲ್ಲಿ ಡಿಜಿಟಲ್ ರೂಪಾಯಿ ಘೋಷಣೆ, ಔಷಧ ಮೇಲಿನ ಸುಂಕ ಇಳಿಕೆಯಂತಹ ಜನಪರ ಘೋಷಣೆಗಳನ್ನು ಗಮನಿಸಿದರೆ ಇದೊಂದು ಜನಪ್ರಿಯ ಮತ್ತು ಜನಪರವಾದ, ರೈತಪರವಾದ ಬಜೆಟ್ ಎನ್ನುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!