ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕುರಿತು ಮಾತನಾಡಿದ್ದಾರೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಮೊದಲು ಶಿಕ್ಷಣ ದೊರೆಯುತ್ತಿತ್ತು.
ಆದರೆ, 2011ರಲ್ಲಿ ಮನಮೋಹನ್ ಸಿಂಗ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಜೆಎಂಯು ಅನ್ನು ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ಎಂದು ಘೋಷಿಸಿತು. ಆ ಬಳಿಕ ಶೇ.50ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ಮೀಸಲಿಡುತ್ತಿದೆ. 2011ರ ಮೊದಲು ಎಲ್ಲಾ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೂ ಮೀಸಲಾತಿ ಸಿಕ್ಕಿತ್ತು. ಶಿಕ್ಷಣ ಕ್ಷೇತ್ರದಲ್ಲೂ ಕಾಂಗ್ರೆಸ್ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಿದೆ ಎಂದು ಆರೋಪಿಸಿದರು.