Wednesday, February 28, 2024

ರೈತರ ಪರಿಹಾರಕ್ಕಿಂತ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದು ಸರ್ಕಾರಕ್ಕೆ ಮುಖ್ಯ: ವಿಜಯೇಂದ್ರ

ಹೊಸದಿಗಂತ ವರದಿ ಬೆಳಗಾವಿ:

ರಾಜ್ಯ ಸರಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ಕೊಡಬೇಕೆಂಬ ಕಳಕಳಿಯಿಲ್ಲದ ಮುಖ್ಯಮಂತ್ರಿಗಳು, ಅಲ್ಪ ಸಂಖ್ಯಾತರಿಗೆ 10 ಸಾವಿರ ರೂ.‌ ಕೋಟಿ ಕೊಡಲು ಘೋಷಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಪರಿಹಾರ ಕೊಡಲು ಸರಕಾರದ ಖಜಾನೆಯಲ್ಲಿ ಹಣ ಇಲ್ಲದಿದ್ದರೂ ಅಲ್ಪಸಂಖ್ಯಾತರಿಗೆ ಹಣ ಕೊಡುತ್ತೇವೆ ಎಂದು ಸಿಎಂ ಹೇಳುತ್ತಾರೆ ಎಂದರು.
ರಾಜ್ಯ ಸರಕಾರದ ಆದ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ಅವರ ಸಮಸ್ಯೆಗಳಿಗೆ ರಾಜ್ಯ ಸರಕಾರ ಸ್ಪಂದನೆ ಮಾಡುತ್ತಿಲ್ಲ.ಆದರೆ ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಅಧಿವೇಶನ ಸಂದರ್ಭದಲ್ಲಿಯೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕಾಂಗ್ರೆಸ್ ಸರಕಾರಕ್ಕೆ ರೈತರ ಬಗ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈ ಕುರಿತು ಸದನದಲ್ಲಿ ಧ್ವನಿ ಎತ್ತಲಾಗುವುದು ಎಂದರು.
ಯಬಿಜೆಪಿಯ ದಲಿತ ಮುಖಂಡನ ಪ್ರಥ್ವಿ ‌ಸಿಂಗ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದೆ. ಪೊಲೀಸ್ ಅಧಿಕಾರಿಗಳು ಜಸ್ಟ್ ಕೇಸ್ ಮಾತ್ರ ದಾಖಲು ಮಾಡಿದ್ದಾರೆ. ಅಟೆಮ್ಟ್ ಟೂ ಮರ್ಡರ್ ಕೇಸ್ ಹಾಕೋದಿಲ್ಲ, 307 ಕೇಸ್ ಹಾಕೋದಿಲ್ಲ. ಅದರ ಬದಲು ಕಾಂಗ್ರೆಸ್ ಎಂಎಲ್‌ಸಿ ಅವರನ್ನು ಎ1 ಮಾಡಿದ್ದಾರೆ. ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!