ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಾದಗಳಿಂದಲೇ ತಮ್ಮ ಟ್ವಿಟರ್ ಖಾತೆ ಕಳೆದುಕೊಂಡ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಇದೀಗ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಮತ್ತೆ ಟ್ವಿಟರ್ಗೆ ಮರಳಿದ್ದಾರೆ.
ಈ ಕುರಿತು ಮಂಗಳವಾರ (ಜ.24) ಅವರು ಮಾಹಿತಿ ನೀಡಿದ್ದಾರೆ.
ಆಕ್ಷೇಪಾರ್ಹ ಟ್ವೀಟ್ ಮಾಡಿದ ಕಾರಣಕ್ಕೆ 20 ತಿಂಗಳ ಹಿಂದೆ ಅವರ ಖಾತೆಯನ್ನು ಸಸ್ಪೆಂಡ್ ಮಾಡಲಾಗಿತ್ತು. ಆದರೆ ಈಗ ಅವರು ಪುನಃ ಟ್ವಿಟರ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಈ ಕುರಿತು ಅವರು ಸಂತಸ ಹಂಚಿಕೊಂಡಿದ್ದು, ‘ಮರಳಿ ಇಲ್ಲಿಗೆ ಬಂದಿದ್ದಕ್ಕೆ ಖುಷಿ ಆಗುತ್ತಿದೆ’ ಎಂದು ಟ್ವೀಟ್ (Kangana Ranaut Tweet) ಮಾಡಿದ್ದಾರೆ. ಅಭಿಮಾನಿಗಳು ಕಮೆಂಟ್ಗಳ ಮೂಲಕ ನೆಚ್ಚಿನ ನಟಿಗೆ ಸ್ವಾಗತ ಕೋರುತ್ತಿದ್ದಾರೆ.
Hello everyone, it’s nice to be back here 🙂
— Kangana Ranaut (@KanganaTeam) January 24, 2023
ಟ್ವಿಟರ್ಗೆ ಮರಳಿ ಬಂದಿರುವ ಕಂಗನಾಅವರು ತಮ್ಮ ಮುಂಬರುವ ಸಿನಿಮಾ ‘ಎಮರ್ಜೆನ್ಸಿ’ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದಿದೆ ಎಂದು ಅವರು ಹೇಳಿದ್ದಾರೆ.
And it’s a wrap !!!
Emergency filming completed successfully… see you in cinemas on 20th October 2023 …
20-10-2023 🚩 pic.twitter.com/L1s5m3W99G— Kangana Ranaut (@KanganaTeam) January 24, 2023