SHOCKING | ಜಾಗತಿಕ ಉದ್ಯಮ ದಿಗ್ಗಜ, ಬಡವರ ಬಂಧು ರತನ್ ಟಾಟಾ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ, ಜಗತ್ತು ಕಂಡ ಯಶಸ್ವಿ ಉದ್ಯಮಿ ರತನ್ ನಾವಲ್ ಟಾಟಾ ಮುಂಬೈನ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ವಿಧಿವಶರಾಗಿದ್ದಾರೆ.
ಅವರಿಗೆ 86 ವರ್ಷ ವಯಸ್ಸಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟಾಟಾ ಅವರನ್ನು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಸಂಜೆ ಅವರ ಆರೋಗ್ಯದಲ್ಲಿ ಹಠಾತ್ ತೀವ್ರ ಏರುಪೇರು ಕಾಣಿಸಿಕೊಂಡಿದ್ದು, ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೆ ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಅವರು ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ ಎಮದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!