ಜಾಗತಿಕ ಹೂಡಿಕೆದಾರರ ಸಮಾವೇಶ: ಎಸ್‌ಐಎ ಪ್ರತಿನಿಧಿಗಳೊಂದಿಗೆ ಸಚಿವ ನಿರಾಣಿ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನವೆಂಬರ್‌ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ಧತೆ ಜೋರಾಗಿದೆ. ಹೀಗಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ್‌ ಆರ್‌. ನಿರಾಣಿ ಅವರ ನಿಯೋಗ ಅಮೆರಿಕಕ್ಕೆ ಭೇಟಿ ನೀಡಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ ಆರ್ ನಿರಾಣಿ ಅವರು ವಾಷಿಂಗ್ಟನ್‌ನಲ್ಲಿ ಗುರುವಾರ ಸಂಜೆ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉಪಕರಣಗಳ ಉತ್ಪಾದಕರ ಸಂಘಟನೆ (ಎಸ್‌ಐಎ) ಮತ್ತು ಅಮೆರಿಕನ್‌ ಚೇಂಬರ್ ಆಫ್ ಕಾಮರ್ಸ್‌ನ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಇದೇ ವೇಳೆ 2022ರ ನವೆಂಬರ್ 2,3 ಮತ್ತು 4 ರಂದು ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!