Global Leader Approval Rating: ಮೊದಲ ಸ್ಥಾನದಲ್ಲಿ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

Global Leader Approval Rating ನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಗ್ರಸ್ಥಾನವನ್ನು ಅಲಂಕರಿಸಿದ್ದಾರೆ.

ಹೊಸದಾಗಿ ಬಿಡುಗಡೆಯಾಗಿರುವ ಅಪ್ರೂವಲ್ ರೇಟಿಂಗ್‌ನಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Biden), ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಅವರನ್ನು ಹಿಂದಿಕ್ಕಿ ಮೋದಿ ಅವರು ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಜನವರಿ 26-31ರ ನಡುವೆ ಮಾರ್ನಿಂಗ್ ಕನ್ಸಲ್ಟ್‌ನ ವಿಶ್ವ ನಾಯಕರ ಅಪ್ರೂವಲ್ ರೇಟಿಂಗ್‌ನಲ್ಲಿ (Approval Rating) ಪ್ರಧಾನಿ ಮೋದಿ ಸಹಿತ 22 ಜಾಗತಿಕ ನಾಯಕರ ಅಪ್ರೂವಲ್ ರೇಟಿಂಗ್ ಹೊಂದಿದೆ.

ಪ್ರಧಾನಿ ಮೋದಿ ಅವರು ಒಟ್ಟು ಶೇ.78 ಅಪ್ರೂವಲ್ ರೇಟ್‌ನೊಂದಿಗೆ ಮೊದಲನೇ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಮೆಕ್ಸಿಕೋ ಅಧ್ಯಕ್ಷ ಲೋಪೆಜ್ ಒಬ್ರಡಾರ್ (Lopez Obrador) ಶೇ.68 ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರು ಶೇ.58 ಅಪ್ರೂವಲ್ ರೇಟಿಂಗ್‌ನೊಂದಿಗೆ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರು ಶೇ.40 ಹಾಗೂ ಬ್ರಿಟನ್ ಪಿಎಂ ರಿಷಿ ಸುನಕ್ ಅವರು ಶೇ.30 ಅಂಕಗಳೊಂದಿಗೆ ಕ್ರಮವಾಗಿ 6 ಮತ್ತು 10ನೇ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ.

 

ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು 52 ಶೇಕಡಾ ರೇಟಿಂಗ್‌ನೊಂದಿಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲುಲಾ ಡಿ ಸಿಲ್ವಾ ಅವರು 50 ಪ್ರತಿಶತದ ಅನುಮೋದನೆಯೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!