February 18, 2026
Wednesday, February 18, 2026
spot_img

AI ಇಂಪ್ಯಾಕ್ಟ್ ಶೃಂಗಸಭೆಗೆ ಜಾಗತಿಕ ನಾಯಕರ ಆಗಮನ: ಆತ್ಮೀಯವಾಗಿ ಬರಮಾಡಿಕೊಂಡ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಭಾರತ್ ಮಂಟಪದಲ್ಲಿ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಗಾಗಿ ಜಗತ್ತಿನ ಹಲವು ದೇಶಗಳ ನಾಯಕರು, ಮುಖ್ಯಸ್ಥರು ದೌಡಾಯಿಸಿದ್ದಾರೆ.

ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಪೆರೆಜ್-ಕ್ಯಾಸ್ಟೆಜಾನ್, ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ, ಕಝಕಿಸ್ತಾನ್ ಪ್ರಧಾನಿ ಓಲ್ಜಾಸ್ ಬೆಕ್ಟೆನೋವ್, ಫಿನ್ಲ್ಯಾಂಡ್ ಪ್ರಧಾನಿ ಪೆಟ್ಟೇರಿ ಓರ್ಪೊ, ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ, ಎಸ್ಟೋನಿಯಾ ಅಧ್ಯಕ್ಷ ಅಲರ್ ಕರಿಸ್ ಸೇರಿದಂತೆ ಹಲವು ನಾಯಕರು ಆಗಮಿಸಿದ್ದು, ಖುದ್ದು ಪ್ರಧಾನಿ ಮೋದಿ ಅವರು ಎಲ್ಲ ಜಾಗತಿಕ ನಾಯಕರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು.

ಮಾರಿಷಸ್ ಪ್ರಧಾನಿ ನವೀನ್​ಚಂದ್ರ ರಾಮ್ಗೂಲಮ್, ಭೂತಾನ್ ಪ್ರಧಾನಿ ತ್ಸೆರಿಂಗ್ ಟೋಬ್ಗೆ, ಸೀಶೆಲ್ಸ್ ಉಪಾಧ್ಯಕ್ಷ ಸೆಬಾಸ್ಟಿಯನ್ ಪಿಳ್ಳೆ, ನೆದರ್ಲ್ಯಾಂಡ್ಸ್ ಪ್ರಧಾನಿ ಡಿಕ್ ಸ್ಕಫ್, ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಮತ್ತು ಕ್ರೊಯೇಷಿಯಾದ ಪ್ರಧಾನಿ ಆಂಡ್ರೆಜ್ ಪ್ಲೆಂಕೋವಿಕ್ ಅವರನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು.

ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸುವ ನಾಯಕರು AI-ಚಾಲಿತ ಪರಿಹಾರಗಳು, ಆರ್ಥಿಕ ಬೆಳವಣಿಗೆ, ಸುಸ್ಥಿರ ಅಭಿವೃದ್ಧಿ ಮತ್ತು ತಂತ್ರಜ್ಞಾನ ಪಾಲುದಾರಿಕೆಗಳ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ.

ಜಾಗತಿಕ ದಕ್ಷಿಣದಲ್ಲಿ ಆಯೋಜಿಸಲಾದ ಮೊದಲ ಜಾಗತಿಕ AI ಸಭೆಯಾದ ಶೃಂಗಸಭೆಯಲ್ಲಿ 20ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು, 60 ಮಂತ್ರಿಗಳು ಮತ್ತು 500 ಜಾಗತಿಕ ನಾಯಕರು ಪಾಲ್ಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !