ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಕೋಟ್ಯಂತರ ಭಕ್ತರನ್ನ ಸೆಳೆಯುತ್ತಿದ್ದು, ಊಹೆಗೂ ಮೀರಿ ಭಕ್ತ ಸಾಗರವೇ ಹರಿದು ಬಂದಿದೆ.
ಕೋಟ್ಯಂತರ ಭಕ್ತರು ಚಳಿ ಮತ್ತು ದಟ್ಟವಾದ ಮಂಜಿನ ಮಧ್ಯೆಯೂ ಗಂಗಾ, ಯಮುನಾ ಮತ್ತು ಸರಸ್ವತಿ ಪವಿತ್ರ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವನ್ನ ಮಾಡ್ತಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಅವರೊಂದಿಗೆ ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಮತ್ತು ಪಕ್ಷದ ಇತರ ನಾಯಕರು ಇದ್ದರು.
ಮಹಾಕುಂಭದ 6ನೇ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಚಿವ ರಾಜನಾಥ್ ಸಿಂಗ್ ಸ್ನಾನ ಮಾಡಿದರು. ಬಳಿಕ, ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಆರತಿ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಕಳೆದ 6 ದಿನಗಳಲ್ಲಿ ಪ್ರಪಂಚದಾದ್ಯಂತದ 7.3 ಕೋಟಿಗೂ ಹೆಚ್ಚು ಭಕ್ತರು ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.