Monday, October 3, 2022

Latest Posts

ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ ಪೂರ್ಣ: ಸೆ.12ರಂದು ತೀರ್ಪು ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗ್ಯಾನವಾಪಿ ಮಸೀದಿ-ಶೃಂಗಾರ್ ಗೌರಿ ಸಂಕೀರ್ಣ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪನ್ನು ಸೆಪ್ಟೆಂಬರ್ 12 ರವರೆಗೆ ಕಾಯ್ದಿರಿಸಿದೆ.
ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರು ಬುಧವಾರ ತಮ್ಮ ವಾದವನ್ನು ಮುಕ್ತಾಯಗೊಳಿಸಿದ್ದಾರೆ. ಮಸೀದಿಯ ಹೊರ ಗೋಡೆಯ ಮೇಲೆ ವಿಗ್ರಹಗಳಿರುವ ಹಿಂದೂ ದೇವತೆಗಳ ದೈನಂದಿನ ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ವಾರಣಾಸಿ ಜಿಲ್ಲಾ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಐವರು ಮಹಿಳೆಯರ ಪರವಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ವಕೀಲ ಮದನ್‌ ಮೋಹನ್‌ ಯಾದವ್‌, ಎರಡೂ ಪಕ್ಷದವರು ತಮ್ಮ ವಾದವನ್ನು ಪೂರ್ಣ ಮಾಡಿದ್ದಾರೆ.
ನ್ಯಾಯಮೂರ್ತಿ ಎಕೆ ವಿಶ್ವೇಶ್ ಸೆಪ್ಟೆಂಬರ್‌ 12ರವರೆಗೆ ತೀರ್ಪನ್ನು ಕಾಯ್ದಿರಿದ್ದಾರೆ ಎಂದು ವಿವರ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!