‘ಎಲ್ಲಾದರು ಹೋಗಿ ಸಾಯಿ’ ಅನ್ನೋದು ಆತ್ಮಹತ್ಯೆಗೆ ಪ್ರಚೋದನೆ ಅಲ್ಲ: ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಗಳದ ವೇಳೆ ಸಿಟ್ಟಿನ ಭಾವನೆಯಲ್ಲಿ ‘ಎಲ್ಲಾದರು ಹೋಗಿ ಸಾಯಿ’ ಎಂದು ವ್ಯಕ್ತಿಯೊಬ್ಬರಿಗೆ ಹೇಳುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಮಹಿಳೆಯೊಬ್ಬರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಅಪರಾಧಿ ಸ್ಥಾನದಲ್ಲಿದ್ದವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಡಿಸಿದೆ.

ಪ್ರಚೋದನೆ ಎಂಬ ಪದ ಕೆಲ ಕಠಿಣ ಅಥವಾ ಅನುಚಿತ ಕ್ರಿಯೆಗೆ ಉತ್ತೇಜಿಸುವುದು ಅಥವಾ ಒತ್ತಾಯಿಸುವುದು, ಕುಮ್ಮಕ್ಕು ನೀಡುವುದನ್ನು ಸೂಚಿಸುತ್ತದೆ. ಎಲ್ಲಾದರೂ ಹೋಗಿ ಸಾಯಿ ಎಂದು ಮೃತ ಮಹಿಳೆಗೆ ಆರೋಪಿಗಳು ಹೇಳಿರುವುದನ್ನು ಒಪ್ಪಿದರೂ, ಅದು ಸಾವಿಗೆ ಪ್ರಚೋದನೆ ನೀಡಿದಂತಾಗುವುದಿಲ್ಲ. ಈ ಹೇಳಿಕೆಯಿಂದ ಮೃತಳನ್ನು ಸಾವಿಗೆ ತಳ್ಳಬೇಕು ಎಂಬ ಅಪರಾಧಿಕ ಮನಸ್ಸನ್ನು ಆರೋಪಿಗಳು ಹೊಂದಿದ್ದರು ಎನ್ನಲಾಗದು ಎಂದು ಹೈಕೋರ್ಟ್ ಹೇಳಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!