ಹೀಗೂ ಉಂಟೇ | ಆಕಾಶಕ್ಕೆ ಹಾರಿದ ವಿಮಾನ… ಭೂಮಿಯಲ್ಲೇ ಉಳಿದ ಪ್ರಯಾಣಿಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

50 ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲೇ ಬಿಟ್ಟು ‘ಗೋ ಫಸ್ಟ್’ ವಿಮಾನವು ಟೇಕಾಫ್‌ ಆಗಿರುವ ಘಟನೆ ಕೆಐಎಎಲ್‌ನಲ್ಲಿ ನಡೆದಿದೆ.  ಇದರಿಂದ ಪ್ರಯಾಣಿಕರು ತೀವ್ರ ಅಸಹನೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೇಸರವನ್ನ ತೋಡಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ (ಜನವರಿ 9, 2023) ಬೆಳಿಗ್ಗೆ ಬೆಂಗಳೂರಿನಿಂದ ದೆಹಲಿಗೆ ಹೊರಡುವ ‘ಗೋ ಫಸ್ಟ್’ ವಿಮಾನ ಪ್ರಯಾಣಿಕರು ಬಗ್ಗೆ ಪರಿಶೀಲಿಸದೆ ಟೇಕಾಫ್‌ ಆಗಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಆಗಿದೆ.

ವಿಮಾನ ಟೇಕಾಫ್ ಆಗುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಉಳಿದಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ಹೊರಹಾಕಿ ವಿಮಾನಯಾನ ಸಂಸ್ಥೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು. ಕೂಡಲೇ ಪ್ರತಿಕ್ರಿಯಿಸಿದ ಗೋಫಸ್ಟ್‌ ವಿಮಾನಯಾನ ಅಧಿಕಾರಿಗಳು ಅನಾನುಕೂಲತೆಗಾಗಿ ಕ್ಷಮಿಸಿ ಎಂದು ಪ್ರತಿಕ್ರಿಯಿಸಿದ್ದಾರೆ. ಸಂಬಂಧಪಟ್ಟ ಪ್ರಯಾಣಿಕರು ತಮ್ಮ ವಿವರಗಳನ್ನು ಹಂಚಿಕೊಳ್ಳಲು ವಿನಂತಿಸಲಾಗಿದೆ.

ವಿಮಾನಯಾನ ಸಂಸ್ಥೆಯ ಜೊತೆಗೆ ಜ್ಯೋತಿರಾದಿತ್ಯ ಸಿಂಧಿಯಾ, ಪ್ರಧಾನಿ ಕಚೇರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಗೆ ಮತ್ತೊಂದು ವಿಮಾನದಲ್ಲಿ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!