ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದಿಂದ ರಾಜ್ಯಕ್ಕೆ ಏನು ತರಬೇಕೋ ಅದನ್ನು ನೋಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ ಎಂದು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ನೇರವಾಗಿಯೇ ವಾಗ್ದಾಳಿ ನಡೆಸಿದ್ದಾರೆ.
ದಸರಾ ಉದ್ಘಾಟನೆ ಸಮಾರಂಭದ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗ ಎಲ್ಲರೂ ಗಾಜಿನ ಮನೆಯಲ್ಲಿ ಇದ್ದೇವೆ. ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದ್ಯಾ? ಎಫ್‌ಐಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್‌ನಲ್ಲಿ ಇರುವವರು ರಾಜೀನಾಮೆ ಕೊಡುತ್ತಾರಾ?
ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ ಎಂದು ಪ್ರಶ್ನಿಸಿದರು. 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಲು ಆಗುತ್ತಾ? ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ನೀಡುವುದಕ್ಕೆ ಸಾಧ್ಯವೇ ಎಂದು ಪ್ರಶ್ನಿಸಿದರು.