ಹೊಸದಿಗಂತ ಡಿಜಿಟಲ್ ಡೆಸ್ಕ್
ಸತೀಶ್ ಜಾರಕಿಹೊಳಿ ಅವರ ವಿವಾದಾತ್ಮಕ ಹೇಳಿಕೆಗೆ ಕಿಡಿಕಾರಿರುವ ಮಧ್ಯಪ್ರದೇಶದ ಗೃಹಸಚಿವ, ಬಿಜಿಪಿ ನಾಯಕ ನರೋತ್ತಮ್ ಮಿಶ್ರಾ, “ಹಿಂದೂಗಳ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಸಮಸ್ಯೆ ಇರುವವರು ಪಾಕಿಸ್ತಾನಕ್ಕೆ ಹೋಗಬಹುದು. ನೆರೆಯ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಪರಿಗಣಿಸಿ ಪಾಕಿಸ್ತಾನದಲ್ಲಿ ಅಂತಹ ಜನರು ಅಗತ್ಯವಿದೆʼ ಎಂದು ತಿರುಗೇಟು ನೀಡಿದ್ದಾರೆ.
‘ಹಿಂದೂ’ ಎಂಬ ಪದವು ಪರ್ಷಿಯನ್ ಪದವಾಗಿದ್ದು, ಅದು ಅತ್ಯಂತ ಕೊಳಕು ಅರ್ಥವನ್ನು ಹೊಂದಿದೆ ಎಂಬ ಕರ್ನಾಟಕ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಯಾಗಿ ನರೋತ್ತಮ್ ಮಿಶ್ರಾ ಪ್ರತಿಕ್ರಿಯೆ ಬಂದಿದೆ. ಕಾಂಗ್ರೆಸ್ ಪಕ್ಷವು ಈ ಕುರಿತು ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಮಿಶ್ರಾ ಒತ್ತಾಯಿಸಿದ್ದು, ಈ ಬಗ್ಗೆ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ