ಕರ್ನಾಟಕ ಚುನಾವಣೆಗೆ ರಜೆ ಘೋಷಿಸಿದ ಗೋವಾ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಮೇ. 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮತದಾನ ಮಾಡಲು ಅನುಕೂಲ ಮಾಡಿಕೊಡಲು ಗೋವಾ ಸರ್ಕಾರ ವೇತನಸಹಿತ ರಜೆ ಘೋಷಿಸಿದೆ.

ಖಾಸಗಿ ಸಂಸ್ಥೆಗಳು ಹಾಗೂ ಕಾರ್ಖಾನೆಗಳ ಕಾರ್ಮಿಕರಿಗೆ ಹಾಗೂ ಸರ್ಕಾರಿ ನೌಕರರಿಗೆ ವೇತನಸಹಿತ ರಜೆ ಘೋಷಿಸಿ ಮತದಾನಕ್ಕೆ ಪ್ರೇರೇಪಣೆ ನೀಡಿದೆ.

ಆದರೆ ಗೋವಾ ಸರ್ಕಾರದ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ನಿರ್ಧಾರ ಅಸಂಬದ್ಧ ಹಾಗೂ ಮೂರ್ಖತನದ ನಿರ್ಧಾರವಾಗಿದೆ, ನೆರೆ ರಾಜ್ಯದ ಚುನಾವಣೆಗೆ ಇಲ್ಲಿ ರಜೆ ನೀಡುವ ಅವಶ್ಯಕತೆ ಇಲ್ಲ ಎಂದು ಗೋವಾ ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ದಾಮೋದರ್ ಕೋಚ್ಕರ್ ಅವರು ಟೀಕಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೊಬ್ಬರು ಮಾತನಾಡಿದ್ದು, ನೆರೆ ರಾಜ್ಯಗಳ ಚುನಾವಣೆಗೆ ರಜೆ ನೀಡಿರುವುದು ಇದೇ ಮೊದಲೇನಲ್ಲ, ಈ ಹಿಂದೆಯೂ ರಜೆ ನೀಡಲಾಗಿದೆ, ಈ ಪದ್ಧತಿ ಹಿಂದಿನಿಂದ ನಡೆದುಕೊಂಡು ಬಂದಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ನಾಳೆ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಮೇ.೧೩ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!