ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲಕರಾದ ಸೌರಭ್ ಲೂಥ್ರಾ ಮತ್ತು ಗೌರವ್ ಲೂಥ್ರಾ ಅವರ ಪೊಲೀಸ್ ಕಸ್ಟಡಿಯನ್ನು, ಗೋವಾ ನ್ಯಾಯಾಲಯ ಸೋಮವಾರ (ಡಿಸೆಂಬರ್ 22) ಐದು ದಿನಗಳ ಕಾಲ ವಿಸ್ತರಿಸಿದೆ.
ಡಿಸೆಂಬರ್ 6ರಂದು 25 ಜನರ ಸಾವಿಗೆ ಕಾರಣವಾದ ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲಕರು ದುರ್ಘಟನೆಯ ನಂತರ ಸಹೋದರರು ಥೈಲ್ಯಾಂಡ್‌ಗೆ ಪಲಾಯನ ಮಾಡಿದ್ದರು.ಡಿಸೆಂಬರ್ 17ರಂದು ಆ ದೇಶದಿಂದ ಅವರನ್ನು ಭಾರತಕ್ಕೆ ಕರೆ ತರಲಾಯಿತು.
ನ್ಯಾಯಾಲಯವು ಸೌರಭ್ ಲೂಥ್ರಾ ಮತ್ತು ಗೌರವ್ ಲೂಥ್ರಾ ಅವರ ಪೊಲೀಸ್ ಕಸ್ಟಡಿಯನ್ನು ಐದು ದಿನಗಳವರೆಗೆ ವಿಸ್ತರಿಸಿದೆ ಎಂದು ಸಂತ್ರಸ್ತರ ಕುಟುಂಬವನ್ನು ಪ್ರತಿನಿಧಿಸುವ ವಕೀಲ ವಿಷ್ಣು ಜೋಶಿ ಹೇಳಿದ್ದಾರೆ.
ಪ್ರಕರಣ ಸಂಬಂಧ ಈವರೆಗೆ ಎಂಟು ಜನರನ್ನು ಬಂಧಿಸಲಾಗಿದ್ದು, ಇಂಗ್ಲೆಂಡ್‌ಗೆ ಪರಾರಿಯಾಗಿರುವ ಆರೋಪಿ ಬ್ರಿಟಿಷ್ ಪ್ರಜೆ ಸುರಿಂದರ್ ಕುಮಾರ್ ಖೋಸ್ಲಾ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.
ಇನ್ನು ಗೋವಾ ನೈಟ್ ಕ್ಲಬ್ ದುರಂತಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್ ಕ್ಲಬ್‌ನ ಮಾಲಕರಾದ ಸೌರವ್ ಮತ್ತು ಗೌರವ್ ಲೂಥ್ರಾ ಅವರನ್ನು ಪೊಲೀಸರು ಬಳಿಕ ಥಾಯ್ಲೆಂಡ್‌ನಿಂದ ಬಂಧಿಸಿ ಭಾರತಕ್ಕೆ ಕರೆತಂದಿದ್ದರು. ಆದರೆ ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ತನಿಖಾಧಿಕಾರಿಗಳ ಜತೆ ಲೂಥ್ರಾ ಬ್ರದರ್ಸ್ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಲಾಗಿದೆ.

