ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ತಿಂಗಳ ಆರಂಭದಲ್ಲಿ ಗೋವಾ ನೈಟ್‌ಕ್ಲಬ್ ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಜನರು ಸಾವನ್ನಪ್ಪಿದ ಕ್ಲಬ್‌ನ ಸಹ-ಮಾಲೀಕರಾದ ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ಅವರನ್ನು ಥೈಲ್ಯಾಂಡ್ ಅಧಿಕಾರಿಗಳು ಮಂಗಳವಾರ ಭಾರತಕ್ಕೆ ಗಡೀಪಾರು ಮಾಡಿದ್ದಾರೆ.
ಥೈಲ್ಯಾಂಡ್ ನಿಂದ ಅವರು ದೆಹಲಿಗೆ ವಿಮಾನ ಹತ್ತಿದ್ದು, ದೆಹಲಿಯಲ್ಲಿ ಇಳಿದ ನಂತರ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಮುಂದಿನ ಕಾನೂನು ಕ್ರಮಗಳಿಗಾಗಿ ಇಬ್ಬರನ್ನೂ ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಥಾಯ್ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಭಾರತೀಯ ರಾಯಭಾರ ಕಚೇರಿಯ ಹಸ್ತಕ್ಷೇಪದ ನಂತರ ಡಿಸೆಂಬರ್ 11 ರಂದು ಫುಕೆಟ್‌ನಲ್ಲಿ ಇಬ್ಬರನ್ನು ಬಂಧಿಸಿದ ಕೆಲವು ದಿನಗಳ ನಂತರ ಈ ಗಡೀಪಾರು ಮಾಡಲಾಗಿದೆ.

