ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….
ಹೊಸ ದಿಗಂತ ವರದಿ, ಅಂಕೋಲಾ:
ಗೋವಾದ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೆ ಅವರು ಬುಧವಾರ ಗೋವಾ ಪರ್ತಗಾಳಿ ಮಠಕ್ಕೆ ಭೇಟಿ ನೀಡಿ ಇತ್ತೀಚೆಗೆ ನಿಧನರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರಿಗೆ ಸಂತಾಪ ಸೂಚಿಸಿದರು.
ಮಠದ ಕಿರಿಯ ಶ್ರೀಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಹಿರಿಯ ಶ್ರೀಗಳ ನಿಧನಕ್ಕೆ ಶೋಕ ವ್ಯಕ್ತಪಡಿಸಿದರು.
ಹಿರಿಯ ಶ್ರೀಗಳು ಮಠದ, ಸಮುದಾಯದ ಅಭಿವೃದ್ಧಿಯ ಜೊತೆಗೆ ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.
ಕಿರಿಯ ಯತಿಗಳು ರಾಜ್ಯಪಾಲರಿಗೆ ಮಠ ಪರಂಪರೆ, ನಡೆಯುತ್ತಿರುವ ಸೇವಾ ಚಟುವಟಿಕೆಯ ಮಾಹಿತಿ ನೀಡಿದರು.
ಮಠ ಕಮಿಟಿಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.