ಭಾರತ ಪುರುಷರ ಹಾಕಿ ಟೀಮ್ ಗೆ ವಿದಾಯ ಹೇಳಿದ ಗೋಲು ಕೀಪರ್​ ಪಿ.ಆರ್ ಶ್ರೀಜೇಶ್​ ಗೆ ಸಿಕ್ಕಿತು ಸಪ್ರೈಸ್ ಗಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್;

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದು ಭಾರತ ಪುರುಷರ ಹಾಕಿ ತಂಡ ಸಾಧನೆ ಮಾಡಿದ್ದು, ಹಾಕಿ ದಿಗ್ಗಜ ಗೋಲು ಕೀಪರ್​ ಪಿ.ಆರ್ ಶ್ರೀಜೇಶ್​ ಈ ಪಂದ್ಯವನ್ನಾಡುವ ಮೂಲಕ ತಮ್ಮ 18 ವರ್ಷಗಳ ಹಾಕಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು.​

ಆದ್ರೆ ಇದೀಗ ಭಾರತೀಯ ಹಾಕಿಗೆ ಅವರು ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಹಾಕಿ ಇಂಡಿಯಾ ಶ್ರೀಜೇಶ್​ ಅವರನ್ನು ಭಾರತ ಜೂನಿಯರ್ ಪುರುಷರ ತಂಡದ ಹೊಸ ಮುಖ್ಯ ಕೋಚ್ ಆಗಿ ನೇಮಿಸಿದೆ.

ಈ ಬಾರಿಯ ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಶ್ರೀಜೇಶ್​ ಇದು ನನ್ನ ಕೊನೆಯ ಒಲಿಂಪಿಕ್ಸ್​ ಎಂದು ಹೇಳಿ ಅಂತಾರಾಷ್ಟ್ರೀಯ ಹಾಕಿಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಅವರಿಗೆ ಪದಕ ಗೆಲುವಿನ ವಿದಾಯ ಲಭಿಸಿದೆ. ಭಾರತ ತಂಡದ ಈ ಪದಕ ಗೆಲುವಿನಲ್ಲಿ ಶ್ರೀಜೇಶ್ ಪ್ರಮುಖ ಪಾತ್ರವಹಿಸಿದ್ದರು. ವಿಶ್ವದ ಅತ್ಯುತ್ತಮ ಗೋಲ್ ಕೀಪರ್ ಎಂಬ ಪುರಸ್ಕಾರವೂ ಸಂದಿತ್ತು. ಈ ಬಾರಿಯೂ ಶ್ರೀಜೇಶ್​ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಭಾರತದ ಪದಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

36 ವಷದ ಕೇರಳದ ಶ್ರೀಜೇಶ್‌ ಭಾರತ ಪರ 336 ಪಂದ್ಯಗಳನ್ನು ಆಡಿದ್ದಾರೆ. 2 ಒಲಿಂಪಿಕ್ಸ್‌ ಕಂಚಿನ ಪದಕ, ಏಷ್ಯನ್‌ ಗೇಮ್ಸ್‌ನಲ್ಲಿ 2 ಚಿನ್ನ, 1 ಕಂಚು, ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 2 ಬೆಳ್ಳಿ, ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯಲ್ಲಿ 2 ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!