ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಪುರುಷರ ಹಾಕಿ ತಂಡವು ಕಂಚಿಗೆ ಮುತ್ತಿಟ್ಟಿದೆ.
ಹರ್ಮನ್‌ಪ್ರೀತ್ ಸಿಂಗ್ ತಂಡ ಇಂದು ನಡೆದ ಸ್ಪೈನ್ ವಿರುದ್ಧ ರೋಚಕ ಮ್ಯಾಚ್ನಲ್ಲಿ 2-1 ಅಂತರದಿಂದ ಗೆಲುವು ಸಾಧಿಸಿದೆ.
ಈ ದಾಖಲೆಗೆ ಕಾರಣರಾದ ಕ್ಯಾಪ್ಟನ್ ಹರ್ಮನ್‌ಪ್ರೀತ್ ಸಿಂಗ್ ತಂಡಕ್ಕೆ ಇದೀಗ ದೇಶವ್ಯಾಪಿ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಕಂಚು ಗೆದ್ದ ಖುಷಿಯಲ್ಲಿರುವ ತಂಡಕ್ಕೆ ದಿಗ್ಗಜ ಆಟಗಾರ, ಗೋಲ್ಕೀಪರ್ ಪಿ.ಆರ್. ಶ್ರೀಜೇಶ್ ಅವರ ವಿದಾಯ ಕಣ್ಣಂಚಲಿ ನೀರು ತರಿಸಿದೆ.
ಪ್ಯಾರಿಸ್ ಒಲಿಂಪಿಕ್ಸ್ 2024ರ ಪದಕದಾಟದಲ್ಲಿ ಕಂಚಿನ ಪದಕದೊಂದಿಗೆ ತಮ್ಮ ವೃತ್ತಿಜೀವನಕ್ಕೆ ಪೂರ್ಣವಿರಾಮ ಇಟ್ಟ ಪಿ.ಆರ್. ಶ್ರೀಜೇಶ್, ತಮ್ಮ ಗೋಲ್ಕೀಪಿಂಗ್ ಗ್ಲೌಸ್ ತೆಗೆದಿಟ್ಟು, ಅದಕ್ಕೆ ನಮಸ್ಕರಿಸುವ ಮೂಲಕ ಭಾವುಕ ವಿದಾಯ ಹೇಳಿದ್ದಾರೆ.
ಗೌರವ ಸಲ್ಲಿಸಿ, ಎಲ್ಲರಿಗೂ ಧನ್ಯವಾದ ತಿಳಿಸಿದ ಸಾರ್ವಕಾಲಿಕ ಶ್ರೇಷ್ಠ ಭಾರತೀಯ ಹಾಕಿ ಆಟಗಾರರಲ್ಲಿ ಒಬ್ಬರಾದ ಶ್ರೀಜೇಶ್ ಅವರ ನಿವೃತ್ತಿಗೆ ಇದೀಗ ಕ್ರೀಡಾ ಅಭಿಮಾನಿಗಳು ತಲೆಬಾಗಿದ್ದಾರೆ.