ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಅವರು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ನೆಲ, ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಇದು ಅವರ ಹೋರಾಟವಲ್ಲ. ರಾಜ್ಯದ ಹೋರಾಟ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.
ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನಮಗೆ ಅದರ ಅಗತ್ಯವೂ ಇಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂದು ನೋಡಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.