ಹೊಸ ದಿಗಂತ ವರದಿ, ಮಂಗಳೂರು:
ರಾಜ್ಯದಲ್ಲಿ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ನಿಷೇಧ ಕುರಿತ ನಿರ್ಧಾರಕ್ಕೆ ಸೋಮವಾರದ ವರೆಗೂ ಕಾಯಿರಿ ಎಂದು ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಖಾದ್ಯಗಳ ಬಗ್ಗೆ ಕೇಳಿ ಬಂದ ದೂರುಗಳ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಆಯುಕ್ತಾಲಯವು ಇವುಗಳ ಸ್ಯಾಂಪಲಲ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದೆ. ಅಲ್ಲಿ ಪರೀಕ್ಷೆ ಕೂಡಾ ನಡೆಸಲಾಗಿದೆ. ಪರೀಕ್ಷಾ ವರದಿಯನ್ನು ಪರಿಶೀಲನೆ ನಡೆಸಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ಸೋಮವಾರ ತಿಳಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಇನ್ನು ಕುಕ್ಕೆ ಸುಬ್ರಮಣ್ಯದಲ್ಲಿ ಸುಸಜ್ಜಿತ ಆಸ್ಪತ್ರೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರೋಗ್ಯ ಆಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಎಂದು ಹೇಳಿದರು.