ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಯಾವ ರೀತಿ ನಮ್ಮ ಗವರ್ನರ್ ಕಚೇರಿ ದುರುಪಯೋಗ ಆಗಿದೆ ಎಂದು ಪ್ರಾಸಿಕ್ಯೂಷನ್ ಆದಮೇಲೆ ಎಲ್ಲವನ್ನೂ ಹೈಕಮಾಂಡ್‌ಗೆ ತಿಳಿಸಬೇಕು. ಹದಿನೈದು ಬಿಲ್‌ಗಳನ್ನು ಗವರ್ನರ್ ವಾಪಸ್ ಕಳುಹಿಸಿದ್ದಾರೆ. ನಾನು ತಪ್ಪು ಮಾಡಿಲ್ಲ ಎಂದು ಸ್ಪಷ್ಟನೆ ಕೇಳಲಿ, ಹೇಳುವುದಿಲ್ಲ ಅಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾಕೆ ಇರಬೇಕು? ಬಿಜೆಪಿ ನಾಯಕರು ಹೇಳಿದ ಕೂಡಲೇ ವಾಪಸ್ಸು ಕಳುಹಿಸಿಬಿಟ್ಟರೆ ಸರೀನಾ ಎಂದು ಪ್ರಶ್ನಿಸಿದ್ದಾರೆ.