ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆ `ದೇವರ ದಯೆ’ ಯಿಂದ ಬದುಕುಳಿದಿದ್ದೇವೆ ಎಂದು ಪಾಕಿಸ್ತಾನದ ರಕ್ಷಣಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಹೇಳಿದ್ದಾರೆ.
ಅಸಿಮ್ ಮುನೀರ್ ಅವರ ಭಾಷಣದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ, ಯಾವಾಗ ಅವರು ಈ ಹೇಳಿಕೆ ನೀಡಿದ್ದು ಎಂಬ ದಿನಾಂಕ ಗೊತ್ತಾಗಿಲ್ಲ.
ಈ ವಿಡಿಯೋದಲ್ಲಿ ಅಸಿಮ್ ಮುನೀರ್ “ಅಲ್ಲಾಹ್ ನಿಮಗೆ ಸಹಾಯ ಮಾಡಿದರೆ ಯಾರೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ” ಎಂಬ ಕುರಾನ್ ಪದ್ಯವನ್ನು ಉಲ್ಲೇಖಿಸಿದ್ದಾರೆ. ಭಾರತದ ಯುದ್ಧದ ಸಮಯದಲ್ಲಿ ಪಾಕಿಸ್ತಾನಕ್ಕೆ ದೈವಿಕ ಬೆಂಬಲ ಸಿಕ್ಕಿತ್ತು. ದೇವರು ನಮ್ಮ ಜೊತೆಗೇ ಇದ್ದ. ಅಲ್ಲಾಹ್ ನಮ್ಮ ಪರವಾಗಿ ಇದ್ದ ಅನುಭೂತಿಯನ್ನು ನಾವು ಅನುಭವಿಸಿದ್ದೆವು ಎಂದು ಹೇಳಿದ್ದಾರೆ.
ಈ ಸಮಾವೇಶದಲ್ಲಿ , ಅಫ್ಘಾನಿಸ್ತಾನದ ಗಡಿಯಾದ್ಯಂತ ಒಳನುಸುಳುವ ಉಗ್ರರಲ್ಲಿ ಆಫ್ಘಾನ್ ಪ್ರಜೆಗಳೇ ಹೆಚ್ಚಾಗಿದ್ದಾರೆ. ಪಾಕಿಸ್ತಾನ ಮತ್ತು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಾಲಿಬಾನ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮೇ ಆರಂಭದಲ್ಲಿ ಆಪರೇಷನ್ ಸಿಂದೂರ್ ಅನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯ ಸಮಯದಲ್ಲಿ ಭಾರತೀಯ ವಾಯುಪಡೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ (ಪಿಒಕೆ) ಅನೇಕ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿತು.

