ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣ: 8 ಅಪರಾಧಿಗಳಿಗೆ ಜಾಮೀನು, ನಾಲ್ವರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

2002ರ ಗೋಧ್ರಾ ರೈಲು ಹತ್ಯಾಕಾಂಡ (Godhra Violence) ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮತ್ತು ನಾಲ್ವರು ಅಪರಾಧಿಗಳ ಜಾಮೀನು ಅರ್ಜಿಯನ್ನುತಿರಸ್ಕರಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು 17 ವರ್ಷಗಳಿಂದ ಜೈಲುವಾಸ ಅನುಭವಿಸಿದ ಹಿನ್ನೆಲೆ ಎಂಟು ಅಪರಾಧಿಗಳಿಗೆ ಜಾಮೀನು ನೀಡಿದೆ. ಈ ಎಂಟು ಜನ ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾದವರು ಮತ್ತು ಈ ಕುರಿತು ಗುಜರಾತ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿಯಲಾಯಿತು.

ಗುಜರಾತ್ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನಾಲ್ವರು ಆರೋಪಿಗಳಿಗೆ ಜಾಮೀನು ನೀಡುವುದನ್ನು ವಿರೋಧಿಸಿದರು. ಅವರಲ್ಲಿ ಒಬ್ಬರಿಂದ ಕಬ್ಬಿಣದ ಪೈಪ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಇನ್ನೊಬ್ಬ ಆರೋಪಿಯಿಂದ ಆಯುಧವನ್ನು (ಕುಡಗೋಲು) ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಕೋಚ್ಗೆ ಬೆಂಕಿ ಹಚ್ಚಲು ಬಳಸಿದ ಪೆಟ್ರೋಲ್ ಅನ್ನು ಖರೀದಿಸಿ, ಸಂಗ್ರಹಿಸಿಟ್ಟುಕೊಂಡಿದ್ದ ಮತ್ತು ಕೊನೆಯ ಆರೋಪಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಲೂಟಿ ಮಾಡಿದ್ದಾರೆ ಎಂದು ದೂರಿದರು.

ಈ ವೇಳೆ, ಮೆಹ್ತಾ ಅವರು ಜಾಮೀನು ವಿರೋಧಿಸಿದ ನಾಲ್ವರು ಅಪರಾಧಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಬಹುದು ಮತ್ತು ಇತರ ಅಪರಾಧಿಗಳಿಗೆ ಜಾಮೀನು ನೀಡಬಹುದು ಎಂದು ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಸಂಜಯ್ ಹೆಗ್ಡೆ ಸಲಹೆ ನೀಡಿದರು.

ನಾಲ್ವರು ಅಪರಾಧಿಗಳ ಜಾಮೀನು ಅರ್ಜಿಯನ್ನು ಎರಡು ವಾರಗಳ ನಂತರವೇ ವಿಚಾರಣೆ ನಡೆಸುವಂತೆ ಪೀಠವನ್ನು ಒತ್ತಾಯಿಸಿದರು. ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸದಂತೆ ಮತ್ತು ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಂದೂಡುವಂತೆ ಮತ್ತೊಬ್ಬ ಹಿರಿಯ ವಕೀಲರು ಪೀಠವನ್ನು ಒತ್ತಾಯಿಸಿದರು. ಈ ವೇಳೆ, ನಾಲ್ವರು ಅಪರಾಧಿಗಳ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಬೇಕು ಮತ್ತು ಒಂದು ವರ್ಷದ ನಂತರ ಈ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಬಹುದು ಎಂದು ಎಂದು ಮೆಹ್ತಾ ಹೇಳಿದರು.

ವಾದ ಆಲಿಸಿದ ಪೀಠವು ಎಂಟು ಅಪರಾಧಿಗಳಿಗೆ ಜಾಮೀನು ನೀಡಿತು ಮತ್ತು ನಾಲ್ವರು ಅಪರಾಧಿಗಳಿಗೆ ಜಾಮೀನು ತಿರಸ್ಕರಿಸಿತು. ವಿಚಾರಣೆಯನ್ನು ಮುಕ್ತಾಯಗೊಳಿಸುತ್ತಾ, ‘ಸೆಷನ್ಸ್ ನ್ಯಾಯಾಲಯದ ಷರತ್ತುಗಳಿಗೆ ಒಳಪಟ್ಟು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಾವು ನಿರ್ದೇಶಿಸುತ್ತೇವೆ ಎಂದು ಪೀಠ ಹೇಳಿದೆ.

ಗುಜರಾತ್ನಲ್ಲಿ ನಡೆದ ಕೋಮುಗಲಭೆಯ ನಂತರ 2002ರ ಗೋದ್ರಾ ರೈಲು ದಹನದ ಆರೋಪಿಗಳಲ್ಲಿ ಒಬ್ಬನಿಗೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್ 15 ರಂದು ಜಾಮೀನು ನೀಡಿತು.

2002ರ ಫೆಬ್ರುವರಿ 27ರಂದು ಗುಜರಾತ್ನ ಗೋಧ್ರಾದಲ್ಲಿ ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ ಪರಿಣಾಮ 59 ಮಂದಿ ಮೃತಪಟ್ಟಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!