ಹೊಸ ದಿಗಂತ ಡಿಜಿಟಲ್ ಡೆಸ್ಕ್:
2002ರ ಗೋಧ್ರಾ ರೈಲು ಕರಣದಲ್ಲಿ ಗುಜರಾತ್ ಸರ್ಕಾರ ಮತ್ತು ಇತರ ಹಲವಾರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು ಫೆಬ್ರವರಿ 13 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಗುರುವಾರ ತಿಳಿಸಿದೆ.
ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ನ್ಯಾಯಪೀಠವು ಮುಂದಿನ ವಿಚಾರಣೆಯ ದಿನಾಂಕದಂದು ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
2002ರ ಫೆಬ್ರವರಿ 27ರಂದು ಗುಜರಾತ್ ನ ಗೋಧ್ರಾದಲ್ಲಿ ಸಬರಮತಿ ಎಕ್ಸ್ಪ್ರೆಸ್ನ ಎಸ್-6 ಬೋಗಿಗೆ ಬೆಂಕಿ ಹಚ್ಚಿ 59 ಮಂದಿ ಮೃತಪಟ್ಟಿದ್ದರು.
ಹಲವಾರು ಅಪರಾಧಿಗಳ ಶಿಕ್ಷೆಯನ್ನು ಎತ್ತಿಹಿಡಿದ ಮತ್ತು 11 ಜನರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದ ಗುಜರಾತ್ ಹೈಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಹಲವಾರು ಮೇಲ್ಮನವಿ ಸಲ್ಲಿಸಲಾಗಿದೆ.