ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ನವಸಾರಿ ಜಿಲ್ಲೆಯ ಗೋಡೌನ್‌ನಲ್ಲಿ ಶನಿವಾರ ಬೆಳಗ್ಗೆ ರಾಸಾಯನಿಕ ಸೋರಿಕೆಯಿಂದ ಉಂಟಾದ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬಿಲ್ಲಿಮೋರಿಯಾ ತಾಲೂಕಿನ ದೇವ್‌ಸರ್ ಗ್ರಾಮದ ಗೋಡೌನ್‌ನಲ್ಲಿ ಕಾರ್ಮಿಕರು ಟ್ರಕ್‌ನಿಂದ ರಾಸಾಯನಿಕ ಬ್ಯಾರೆಲ್‌ಗಳನ್ನು ಇಳಿಸುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಬಿವಿ ಗೋಹಿಲ್ ಹೇಳಿದ್ದಾರೆ.
“ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ. ಗಾಯಾಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.