ಹಿಜಾಬ್ ನಿಷೇಧ ಹಿಂಪಡೆಯಲು ಹೊರಟಿರುವುದು ಸರಿಯಲ್ಲ: ರೇಣುಕಾಚಾರ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್ ನಿಷೇಧ ಹಿಂಪಡೆದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತುಘಲಕ್ ಮಾನಸಿಕತೆಯದ್ದಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರದ ಬದಲು ಹಿಜಾಬ್ ಧರಿಸದಂತೆ ಹೊರಡಿಸಿದ್ದ ನಮ್ಮ ಸರ್ಕಾರದ ಆದೇಶವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಸುಪ್ರೀಂ ಕೋರ್ಟ್ ಸಹ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಹೀಗಿರುವಾಗ ರಾಜ್ಯದಲ್ಲಿರುವ ಟಿಪ್ಪು ಸುಲ್ತಾನ್ ಸಂತತಿಯ ತುಘಲಕ್ ಸರ್ಕಾರ ಹಿಜಾಬ್ ನಿಷೇಧ ಹಿಂಪಡೆಯಲು ಹೊರಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಲ್‌ಕೆಜಿಯಿಂದ ಕಾಲೇಜು ಹಂತದವರೆಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ ನಮ್ಮ ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ಕೊಡಬೇಕಾಗುತ್ತದೆ. ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ನೀಡುತ್ತೇವೆ ಎಂದು ಅವರು ಎಚ್ಚರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!