August 17, 2026
Monday, August 17, 2026
spot_img

ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಗೋಕಾಕ್ ನ ಖಾಸಗಿ ಕೋಚಿಂಗ್ ಶಿಕ್ಷಕ ಅರೆಸ್ಟ್

ಹೊಸದಿಗಂತ ವರದಿ ಬೆಳಗಾವಿ :

ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದ ಖಾಸಗಿ ಕೋಚಿಂಗ್ ಸೆಂಟರ್ ಒಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಸಂಸ್ಥೆಯ ಶಿಕ್ಷಕನೇ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಕೋಚಿಂಗ್ ಸೆಂಟರ್ ಮುಂದೆ ಭಾರಿ ಪ್ರತಿಭಟನೆ ನಡೆಸಿದರು.

ಕೋಚಿಂಗ್ ಸೆಂಟರ್ ನ ಶಿಕ್ಷಕ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗೋಕಾಕ್ ನಗರ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !