spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗೋಕರ್ಣ ಕ್ಷೇತ್ರ| ಪೂಜಾ ಹಕ್ಕುಗಳಿಗೆ ಸಂಬಂಧಿಸಿ ಕಾನೂನು ಸುವ್ಯವಸ್ಥೆಗೆ ದಕ್ಕೆ ನಡೆಸಿದರೆ ಕಠಿಣ ಕ್ರಮ

- Advertisement -Nitte

ಹೊಸ ದಿಗಂತ ವರದಿ, ಅಂಕೋಲಾ:

ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಾಲಯದ ಪೂಜಾ ಹಕ್ಕುಗಳಿಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹ ಘಟನೆಗಳು ನಡೆಸಿದರೆ ಅಂಥವರ ಮೇಲೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಿಳಿಸಿದ್ದಾರೆ.
ದೇವಾಲಯದ ಆಡಳಿತಕ್ಕೆ ಸಂಬಂಧಿಸಿದಂತೆ ವ್ಯಾಜ್ಯ ನ್ಯಾಯಾಲಯದಲ್ಲಿ ಇರುವುದರಿಂದ ಭಕ್ತ ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಆಡಳಿತ ಸಮಿತಿ ರಚಿಸಲಾಗಿದ್ದು ಸೆಪ್ಟೆಂಬರ್ 27 ರಂದು ಸಮಿತಿಯ ಅಧ್ಯಕ್ಷ ನಿವೃತ್ತ ನ್ಯಾಯಾಧೀಶ ಬಿ.ಎಂ.ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಮಸ್ಯೆ ಕುರಿತು ಚರ್ಚೆ ನಡೆಸಿ ಕಾನೂನಾತ್ಮಕವಾಗಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದು ಅವರು ತಿಳಿಸಿದರು.
ಪೂಜಾ ಹಕ್ಕುಗಳಿಗೆ ಸಂಬಂಧಿಸಿದಂತೆ ಲಿಖಿತವಾಗಿ ಸಲ್ಲಿಸುವ ವಿಷಯಗಳನ್ನು ಪರಿಶೀಲಿಸಿ, ನ್ಯಾಯಾಲಯಗಳ ವಿವಿಧ ತೀರ್ಪುಗಳ ಆಧಾರದ ಮೇಲೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಅಲ್ಲಿಯ ವರೆಗೆ ಮಂಗಳವಾರ ಸಹಾಯಕ ಆಯುಕ್ತರು ನೀಡಿರುವ ಸೂಚನೆಗೆ ಬದ್ಧರಾಗಿ ಎಲ್ಲರೂ ನಡೆದುಕೊಳ್ಳಬೇಕು ತಪ್ಪಿದ್ದಲ್ಲಿ ಕಠಿಣ ಕ್ರಮ ಜರುಗಿಸುವ ಕುರಿತು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಗೋಕರ್ಣ ಮಹಾಬಲೇಶ್ವರ ದೇವಾಲಯದ ಪ್ರಮುಖ ಪೂಜಾ ಹಕ್ಕುಗಳಿಗೆ ಸಂಬಂಧಿಸಿದಂತೆ ಮಂಗಳವಾರ ಎರಡು ಗುಂಪುಗಳ ನಡುವಿನ ಗಲಾಟೆಯಿಂದಾಗಿ ಭಕ್ತರು ದೇವರ ವಿಶೇಷ ಸೇವೆಗಳಿಂದ ವಂಚಿತರಾದ ಘಟನೆ ನಡೆದು ಸಹಾಯ ಆಯುಕ್ತ ರಾಹುಲ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಲು ಕಾರಣವಾಗಿತ್ತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss