ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬಕ್ಕೆ ಚಿನ್ನ ಖರೀದಿಸುವವರಿಗೆ ಸಂತಸದ ಸುದ್ದಿ ಇದು. ಸತತ ಮೂರನೇ ದಿನವೂ ಚಿನ್ನದ ಬೆಲೆ ಕುಸಿತ ಕಂಡಿದೆ. ಭಾರತದಲ್ಲಿ ಇಂದು (ಗುರುವಾರ) ಬೆಳಗ್ಗೆ 10 ಗ್ರಾಂ 22ಕ್ಯಾರೆಟ್ ಚಿನ್ನದ 150ರೂ. ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಮೇಲೆ 160ರೂ ಇಳಿಕೆಯಾಗಿದೆ. ಇದರಿಂದಾಗಿ ಮೂರು ದಿನದೊಳಗೆ 350 ರಿಂದ 400 ರೂ.ವರೆಗೆ ಇಳಿಕೆಯಾಗಿದೆ.
ದೇಶದ ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆ
- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ. 56,250, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 61,350.
- ಮುಂಬೈ, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ. 56,100 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 61,200 ತಲುಪಿದೆ.
- ಚೆನ್ನೈನಲ್ಲಿ 10 ಗ್ರಾಂ 22ಕ್ಯಾರೆಟ್ ಚಿನ್ನದ ಬೆಲೆ ರೂ.56,600ರಷ್ಟಿದ್ದರೆ, 24ಕ್ಯಾರೆಟ್ ಚಿನ್ನ ರೂ.61,750ಕ್ಕೆ ತಲುಪಿದೆ.
- ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ ರೂ. 56,100 ಆಗಿದ್ದರೆ 10 ಗ್ರಾಂ 24 ಕ್ಯಾರೆಟ್ ಚಿನ್ನ ರೂ. 61,200ರಷ್ಟಿದೆ.
ಬೆಳ್ಳಿ ಬೆಲೆಯಲ್ಲೂ ಇಳಿಕೆ
ಗುರುವಾರ ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಕಿಲೋ ಬೆಳ್ಳಿ 1000ರೂ. ಕಡಿಮೆಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿನ ಬೆಲೆಗಳನ್ನು ಗಮನಿಸಿದರೆ, ಚೆನ್ನೈನಲ್ಲಿ ಒಂದು ಕಿಲೋ ಬೆಳ್ಳಿಯ ಬೆಲೆ ರೂ. 76,500. ಮುಂಬೈ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಒಂದು ಕಿಲೋ ಬೆಳ್ಳಿ ರೂ.73,500, ಬೆಂಗಳೂರಿನಲ್ಲಿ ಕಿಲೋ ಬೆಳ್ಳಿ ರೂ.73 ಸಾವಿರ, ಹೈದರಾಬಾದ್‌ನಲ್ಲಿ ಒಂದು ಕಿಲೋ ಬೆಳ್ಳಿ ರೂ. 76,500 ತಲುಪಿದೆ.