ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶೀಯ ಮಾರುಕಟ್ಟೆಯಲ್ಲಿ ಈ ವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗ್ರಾಹಕರಿಗೆ ಬಿಸಿ ಮುಟ್ಟಿಸಿವೆ. ಕೇವಲ ಐದು ಕೆಲಸದ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಏರಿಕೆ ದಾಖಲಾಗಿದ್ದು, ಹೂಡಿಕೆದಾರರನ್ನು ತನ್ನತ್ತ ಸೆಳೆಯುತ್ತಿದೆ.
ಕಳೆದ ಒಂದು ವಾರದ ಅವಧಿಯಲ್ಲಿ 10 ಗ್ರಾಂ (24 ಕ್ಯಾರೆಟ್) ಚಿನ್ನದ ಬೆಲೆಯಲ್ಲಿ ಅಂದಾಜು 1,540 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಮೇ 3 ರಂದು ಪ್ರತಿ 10 ಗ್ರಾಂ ಚಿನ್ನದ ಬೆಲೆ 1,51,580 ರೂಪಾಯಿ ಇತ್ತು. ಆದರೆ, ಮೇ 9 ರ ವೇಳೆಗೆ ಮಾರುಕಟ್ಟೆಯಲ್ಲಿ ಇದು 1,53,120 ರೂಪಾಯಿಗೆ ತಲುಪುವ ಮೂಲಕ ಹೊಸ ದಾಖಲೆ ಬರೆದಿದೆ.
ಬಂಗಾರದ ಹಾದಿಯಲ್ಲೇ ಸಾಗಿರುವ ಬೆಳ್ಳಿಯ ಬೆಲೆಯೂ ಕೂಡ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಮೇ 3 ರಂದು ಪ್ರತಿ ಕೆಜಿ ಬೆಳ್ಳಿಯ ಬೆಲೆ 2,51,220 ರೂಪಾಯಿ ಇತ್ತು. ಕೇವಲ ಏಳು ದಿನಗಳ ಅಂತರದಲ್ಲಿ ಇದು 2,62,330 ರೂಪಾಯಿಗೆ ಏರಿಕೆಯಾಗಿದೆ. ಅಂದರೆ, ಕೇವಲ ಒಂದೇ ವಾರದಲ್ಲಿ ಬೆಳ್ಳಿ ಬೆಲೆಯಲ್ಲಿ 11,110 ರೂಪಾಯಿಗಳಷ್ಟು ಬೃಹತ್ ಏರಿಕೆ ಕಂಡುಬಂದಿದೆ.
ಮಾರುಕಟ್ಟೆ ತಜ್ಞರ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಈ ಭಾರಿ ಏರಿಕೆಗೆ ಈ ಕೆಳಗಿನ ಅಂಶಗಳು ಕಾರಣವಾಗಿವೆ:
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚುತ್ತಿರುವುದು ಭಾರತೀಯ ದರಗಳ ಮೇಲೆ ನೇರ ಪರಿಣಾಮ ಬೀರಿದೆ.
ಅಮೆರಿಕನ್ ಡಾಲರ್ ಮೌಲ್ಯದಲ್ಲಿನ ಏರಿಳಿತಗಳು ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದತ್ತ ಮುಖ ಮಾಡುವಂತೆ ಮಾಡಿದೆ.
ಕೈಗಾರಿಕಾ ವಲಯದಲ್ಲಿ ಬೆಳ್ಳಿಯ ಬಳಕೆ ಹೆಚ್ಚುತ್ತಿರುವುದು ಬೆಳ್ಳಿಯ ಬೆಲೆ ಗಗನಕ್ಕೇರಲು ಪ್ರಮುಖ ಕಾರಣವಾಗಿದೆ.
ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆಯಾಗಿ ಚಿನ್ನ ಮತ್ತು ಬೆಳ್ಳಿಯನ್ನು ಪರಿಗಣಿಸುತ್ತಿರುವುದರಿಂದ ಬೇಡಿಕೆ ಹೆಚ್ಚಿದೆ.



