ಚಿನ್ನ ವಂಚನೆ ಕೇಸ್‌ | ರಾತ್ರಿಯಿಡಿ ವಿನಯ್ ಕುಲಕರ್ಣಿ ಮನೆಯಲ್ಲಿ ಇಡಿ ಶೋಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗೋಲ್ಡ್‌ ವಂಚನೆ ಕೇಸ್‌ಗೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಹಾಗೂ ಐಶ್ವರ್ಯಾ ಗೌಡ ಮನೆ ಮೇಲೆ ಇಡಿ ದಾಳಿ ಮಾಡಿದ್ದು, ರಾತ್ರಿಯಿಡೀ ಶೋಧ ನಡೆದಿದೆ.

ವಿನಯ್ ಕುಲಕರ್ಣಿ ಬೆಂಗಳೂರಿನಲ್ಲಿರುವ ಮನೆ ಹಾಗೂ ಐಶ್ವರ್ಯಾ ಗೌಡರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

ವಿಚಾರಣೆ ವೇಳೆ ಸೂಕ್ತ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಐಶ್ವರ್ಯಾ ಗೌಡ ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ವೇಳೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್‌ ವಹಿವಾಟು ಸೇರಿ ಇತರೆ ಮಾಹಿತಿಗಳನ್ನು ಕಲೆಹಾಕಿದ್ದು, ಇಬ್ಬರಿಂದಲೂ ವಿವರಣೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!