ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ (Gold) ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರು ದೂರು ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ದಂಪತಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಚಿನ್ನ ಪಡೆದು ವಂಚಿಸಿದ ಪ್ರಕರಣದಲ್ಲಿ ಐಶ್ವರ್ಯಾ ಗೌಡ ದಂಪತಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಐಶ್ವರ್ಯಾ ಗೌಡ ಹಾಗೂ ಪತಿ ಹರೀಶ್ಗೆ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ದೊರಕಿದೆ.
ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ಏಕಸದಸ್ಯ ಪೀಠದ ಆದೇಶ ಹೊರಡಿಸಿದ್ದು, ಐಶ್ವರ್ಯಾ ಹಾಗೂ ಪತಿ ಹರೀಶ್ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದೆ.
ಇದರ ಜೊತೆಗೆ ಐಶ್ವರ್ಯಗೌಡ ದಂಪತಿಗೆ ತನಿಖೆಗೆ ಸಹಕರಿಸಬೇಕು, ಅರ್ಜಿದಾರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾಧಿಕಾರಿ ಶೋಧ ನಡೆಸಬಹುದು ಹಾಗೂ ತನಿಖೆ ಮುಂದುವರಿಸುವಂತೆಯೂ ಹೈಕರ್ಟ್ ನ್ಯಾಯಮೂರ್ತಿ ಆದೇಶಿಸಿದ್ದಾರೆ.
ಆರೋಪಿಗಳ ಪರವಾಗಿ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು.