ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 52 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ವಿದೇಶದಿಂದ 731 ಗ್ರಾಂ ಅಕ್ರಮ ಚಿನ್ನವನ್ನು ಜಪ್ತಿ ಮಾಡಲಾಗಿದೆ. ಬ್ಯಾಂಕಾಕ್, ದಮ್ಮಾಮ್ ಮತ್ತು ದುಬೈನಿಂದ ಚಿನ್ನ ತಂದಿದ್ದ ಮೂವರು ಪ್ರಯಾಣಿಕರನ್ನು ಬಂಧಿಸಲಾಗಿದೆ.
ಬಿಸ್ಕೆಟ್ ಮತ್ತು ಆಭರಣಗಳ ರೂಪದಲ್ಲಿ ಚಿನ್ನವನ್ನು ಆರೋಪಿಗಳು ತಂದಿದ್ದರು ಎನ್ನಲಾಗಿದೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮವಾಗಿ ಚಿನ್ನಾಭರಣ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಅಧಿಕಾರಿಗಳು ಮೂವರನ್ನು ಬಂಧಿಸಿ 52 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.