ಚಿನ್ನ ಅಕ್ರಮ ಸಾಗಾಟ: ರೂ.19 ಲಕ್ಷ ಮೌಲ್ಯದ ಚಿನ್ನ ವಶ

ಹೊಸದಿಗಂತ ವರದಿ, ಮಂಗಳೂರು:

ತೆರಿಗೆ ವಂಚಿಸಿ ಅಕ್ರಮವಾಗಿ ರೂ.19 ಲಕ್ಷ ಮೌಲ್ಯದ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಭಟ್ಕಳ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ದುಬೈನಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದು, ತಪಾಸಣೆ ವೇಳೆ ಆತನಲ್ಲಿ 18,95,400 ರೂ. ಮೌಲ್ಯದ 364.500 ಗ್ರಾಂ ಚಿನ್ನ ಪತ್ತೆಯಾಗಿದೆ. ಈತ ಚಿನ್ನವನ್ನು ಪೇಸ್ಟ್ ರೂಪಕ್ಕೆ ಮಾರ್ಪಡಿಸಿ ಅದನ್ನು ಪೇಪರ್‌ನಲ್ಲಿ ಸುತ್ತಿ ಒಳ ಉಡುಪಿನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಬಯಲಾಗಿದ್ದು, ಅಧಿಕಾರಿಗಳು ಆತನನ್ನು ವಿಚಾರಣೆಗೊಳಪಡಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!