April 14, 2026
Tuesday, April 14, 2026
spot_img

GOLD RATE | ಚಿನ್ನದ ಬೆಲೆ 135 ರೂ ಹೆಚ್ಚಳ! ನಿನ್ನೆಯಿದ್ದ ರೇಟ್‌ ಇವತ್ತಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿನ್ನೆಯಿದ್ದ ಚಿನ್ನದ ಬೆಲೆ ಇವತ್ತು ಇಲ್ಲದಂತಾಗಿದೆ. ಇಂದು ಚಿನ್ನದ ರೇಟ್‌ ಗ್ರಾಮ್​​ಗೆ 135 ರೂಗಳಷ್ಟು ಹೆಚ್ಚಳ ಆಗಿದೆ.

ಇದರ ಬೆಲೆ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,930 ರೂಪಾಯಿ ಆಗಿದೆ.

100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !