August 24, 2026
Monday, August 24, 2026
spot_img

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಇಂದು ಹಳದಿ ಲೋಹದ ದರ ಎಷ್ಟಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾರಾಂತ್ಯದ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುತ್ತಿದ್ದರೂ, ಭಾರತದಲ್ಲಿ ಮಾತ್ರ ಪ್ರತಿ ಗ್ರಾಮ್ ಚಿನ್ನಕ್ಕೆ 70 ರೂಪಾಯಿಗಳಷ್ಟು ಬೆಲೆ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹಳದಿ ಲೋಹದ ಬೆಲೆ ಏರಿಕೆ ಕಂಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ 22 ಕ್ಯಾರೆಟ್‌ನ 10 ಗ್ರಾಮ್ ಚಿನ್ನದ ಬೆಲೆ 1,31,350 ರೂಪಾಯಿ ತಲುಪಿದೆ. ಇನ್ನು ಅತ್ಯಂತ ಶುದ್ಧವಾದ 24 ಕ್ಯಾರೆಟ್‌ನ (ಅಪರಂಜಿ) 10 ಗ್ರಾಮ್ ಬಂಗಾರದ ಬೆಲೆ 1,43,290 ರೂಪಾಯಿ ಆಗಿದೆ.

ಸ್ಥಿರವಾಗಿ ಕಾಯ್ದುಕೊಂಡ ಬೆಳ್ಳಿ ದರ

ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದರೂ, ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಶುಕ್ರವಾರದ ಮಾರುಕಟ್ಟೆಯಲ್ಲಿ 5 ರೂಪಾಯಿ ಇಳಿಕೆ ಕಂಡಿದ್ದ ಬೆಳ್ಳಿ, ಇಂದು ಅದೇ ದರವನ್ನು ಮುಂದುವರಿಸಿದೆ. ಪ್ರಸ್ತುತ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 100 ಗ್ರಾಮ್ ಬೆಳ್ಳಿಯ ಬೆಲೆ 23,000 ರೂಪಾಯಿ ಆಗಿದೆ. ಆದರೆ, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ 100 ಗ್ರಾಮ್ ಬೆಳ್ಳಿ ದರ 23,500 ರೂಪಾಯಿಗಳಷ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !