August 23, 2026
Sunday, August 23, 2026
spot_img

Gold Rate | ಬಂಗಾರದ ಓಟಕ್ಕೆ ಬ್ರೇಕ್: ಹಳದಿ ಲೋಹದ ಬೆಲೆಯಲ್ಲಿ ಕೊಂಚ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಹಳದಿ ಲೋಹದ ಬೆಲೆಯಲ್ಲಿ ಗುರುವಾರ ತುಸು ಇಳಿಕೆಯಾಗುವ ಮೂಲಕ ಗ್ರಾಹಕರಿಗೆ ಸಮಾಧಾನ ತಂದಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 230 ರೂಪಾಯಿಗಳಷ್ಟು ಕಡಿತವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತಗಳ ಪರಿಣಾಮವಾಗಿ ಭಾರತದಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯ ಹಾದಿ ಹಿಡಿದಿವೆ.

ಪ್ರಸ್ತುತ ದೇಶದಲ್ಲಿ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 1,36,550 ರೂಪಾಯಿ ಹಾಗೂ 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,48,970 ರೂಪಾಯಿ ದಾಖಲಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ನಿನ್ನೆ 5 ರೂಪಾಯಿ ಏರಿಕೆಯಾಗಿದ್ದ ಬೆಲೆ ಇಂದು ಅಷ್ಟೇ ಪ್ರಮಾಣದಲ್ಲಿ ತಗ್ಗಿದೆ. ಸದ್ಯ 100 ಗ್ರಾಂ ಬೆಳ್ಳಿಯ ಬೆಲೆ 25,000 ರೂಪಾಯಿ ಇದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನಕ್ಕೆ 1,36,550 ರೂಪಾಯಿ ಹಾಗೂ 100 ಗ್ರಾಂ ಬೆಳ್ಳಿಗೆ 25,000 ರೂಪಾಯಿ ನಿಗದಿಯಾಗಿದೆ. ಆದರೆ ನೆರೆರಾಜ್ಯಗಳಾದ ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಬೆಳ್ಳಿ ಬೆಲೆ ತುಸು ಹೆಚ್ಚಾಗಿದ್ದು, 100 ಗ್ರಾಂಗೆ 25,500 ರೂಪಾಯಿ ತಲುಪಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !