June 27, 2026
Saturday, June 27, 2026
spot_img

ಚಿನ್ನ ಖರೀದಿದಾರರಿಗೆ ಶಾಕ್: ಸತತ ಮೂರು ದಿನಗಳಿಂದ ಬಂಗಾರದ ಬೆಲೆಯಲ್ಲಿ ಸತತ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಆಭರಣ ಮಾರುಕಟ್ಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತಗಳ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲೂ ಹಳದಿ ಲೋಹದ ದರಗಳು ಗಗನಕ್ಕೇರಿವೆ.

18K, 22K ಮತ್ತು 24K ಚಿನ್ನದ ಇಂದಿನ ದರ

ಪ್ರಸ್ತುತ ಮಾರುಕಟ್ಟೆಯಲ್ಲಿ ಶುದ್ಧ ಚಿನ್ನ ಅಂದರೆ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 16,000 ರೂಪಾಯಿಯ ಸಮೀಪಕ್ಕೆ ತಲುಪಿದೆ. ಇನ್ನು 18 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಮ್‌ಗೆ ಸುಮಾರು 12,000 ರೂಪಾಯಿಗಳ ಗಡಿಗೆ ಬಂದು ನಿಂತಿದೆ.

ಸಾಮಾನ್ಯವಾಗಿ ಆಭರಣ ತಯಾರಿಕೆಗೆ ಬಳಸುವ 22 ಕ್ಯಾರೆಟ್ ಬಂಗಾರದ ಬೆಲೆಯಲ್ಲಿ ಇಂದು ಪ್ರತಿ ಗ್ರಾಮ್‌ಗೆ 145 ರೂಪಾಯಿ ಏರಿಕೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಒಟ್ಟಾರೆಯಾಗಿ 340 ರೂಪಾಯಿಗಳಷ್ಟು ಬೆಲೆ ಹೆಚ್ಚಳ ದಾಖಲಾಗಿದೆ. ಇದರೊಂದಿಗೆ ಭಾರತದಲ್ಲಿ ಪ್ರಸ್ತುತ 10 ಗ್ರಾಮ್ ತೂಕದ 22 ಕ್ಯಾರೆಟ್ ಚಿನ್ನದ ಬೆಲೆ 1,46,600 ರೂಪಾಯಿ ಆಗಿದ್ದರೆ, 10 ಗ್ರಾಮ್‌ನ 24 ಕ್ಯಾರೆಟ್ ಚಿನ್ನದ ಬೆಲೆ 1,59,930 ರೂಪಾಯಿಗಳಿಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲಿ ಚೇತರಿಕೆ

ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆ ಕಾಣುತ್ತಿದ್ದ ಬೆಳ್ಳಿ ದರದಲ್ಲಿ ಇಂದು ದಿಢೀರ್ ಚೇತರಿಕೆ ಕಂಡುಬಂದಿದೆ. ಇಂದು ಬೆಳ್ಳಿ ಬೆಲೆ ಪ್ರತಿ ಗ್ರಾಮ್‌ಗೆ 5 ರೂಪಾಯಿಗಳಷ್ಟು ಹೆಚ್ಚಾಗಿದೆ. ಸದ್ಯ ದೇಶದಲ್ಲಿ 100 ಗ್ರಾಮ್ ಬೆಳ್ಳಿಯ ಬೆಲೆ 28,500 ರೂಪಾಯಿ ಆಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !