Friday, January 9, 2026

Gold Rate | ಬಂಗಾರದ ಓಟಕ್ಕೆ ತಾತ್ಕಾಲಿಕ ಬ್ರೇಕ್: ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಕೆಲ ದಿನಗಳಿಂದ ಸತತ ಏರಿಕೆ ಕಾಣುವ ಮೂಲಕ ಗ್ರಾಹಕರಿಗೆ ಬಿಸಿ ಮುಟ್ಟಿಸಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ತುಸು ತಗ್ಗಿವೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳ ಹಿನ್ನೆಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲೂ ಬೆಲೆಗಳಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಮ್ ಚಿನ್ನದ ಬೆಲೆಯಲ್ಲಿ 35 ರೂ. ಇಳಿಕೆಯಾಗಿದ್ದರೆ, ಬೆಳ್ಳಿ ಬೆಲೆ ಪ್ರತಿ ಗ್ರಾಮ್‌ಗೆ 1 ರೂ. ನಷ್ಟು ತಗ್ಗಿದೆ. ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ದರದಲ್ಲಿ ಆದ ವ್ಯತ್ಯಯಗಳು ಸ್ಥಳೀಯ ಮಾರುಕಟ್ಟೆಯ ಮೇಲೂ ಪ್ರಭಾವ ಬೀರಿವೆ.

ಇಂದಿನ ಮಾರುಕಟ್ಟೆ ದರ ಹೀಗಿದೆ (10 ಗ್ರಾಮ್):

22 ಕ್ಯಾರಟ್ ಚಿನ್ನ: 1,24,450 ರೂಪಾಯಿ.

24 ಕ್ಯಾರಟ್ (ಅಪರಂಜಿ) ಚಿನ್ನ: 1,35,820 ರೂಪಾಯಿ.

ಬೆಳ್ಳಿ ಬೆಲೆ: ಪ್ರತಿ 100 ಗ್ರಾಮ್‌ಗೆ 24,100 ರೂಪಾಯಿ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 10 ಗ್ರಾಮ್ ಚಿನ್ನದ ಬೆಲೆ 1,24,450 ರೂಪಾಯಿ ಹಾಗೂ ಬೆಳ್ಳಿ ಬೆಲೆ 100 ಗ್ರಾಮ್‌ಗೆ 24,100 ರೂಪಾಯಿ ಇದೆ. ಇನ್ನು ನೆರೆ ರಾಜ್ಯಗಳಾದ ತಮಿಳುನಾಡು ಹಾಗೂ ಕೇರಳದ ಕೆಲವು ಭಾಗಗಳಲ್ಲಿ ಬೆಳ್ಳಿಯ ಬೆಲೆ 100 ಗ್ರಾಮ್‌ಗೆ 25,700 ರೂಪಾಯಿ ತಲುಪಿದೆ.

error: Content is protected !!