October 18, 2026
Sunday, October 18, 2026
spot_img

ಚಿನ್ನ ಕಳ್ಳಸಾಗಣೆ ಪ್ರಕರಣ: ಕೊನೆಗೂ ನಟಿ ರನ್ಯಾ ರಾವ್​​​ಗೆ ಸಿಕ್ಕಿತು ಜೈಲಿಂದ ಬಿಡುಗಡೆ ಭಾಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟಿ ರನ್ಯಾ ರಾವ್​​ಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

2025ರ ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ರನ್ಯಾ ರಾವ್​​​​ ಅವರನ್ನು ಡಿಆರ್‌ಐ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ 14.213 ಕೆಜಿ ಚಿನ್ನ ಪತ್ತೆಯಾಗಿತ್ತು. ಈ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದರು.

ಕಳೆದ 1 ವರ್ಷದಿಂದ ಪರಪ್ಪನ ಅಗ್ರಹಾರದಲ್ಲಿರುವ ರನ್ಯಾ ರಾವ್ ಗೆ ಈ ಹಿಂದೆಯೇ ಕೋರ್ಟ್​ನಿಂದ ಜಾಮೀನು ಸಿಕ್ಕಿತ್ತು. ಆದರೆ ಕಾಫಿಪೋಸಾ ಜಾರಿ ಹಿನ್ನೆಲೆ ಜೈಲಿನಲ್ಲಿ ಉಳಿದಿದ್ದರು. ಇದೀಗ ಅವಧಿ ಮುಗಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ.

ಕಳ್ಳಸಾಗಣೆ ಆರೋಪ ಹೊಂದಿರುವ ವ್ಯಕ್ತಿಗಳಿಗೆ ಕಾಫಿಪೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಹೀಗಾಗಿ ಜಾಮೀನು ಸಿಕ್ಕರೂ ಕನಿಷ್ಠ ಒಂದು ವರ್ಷ ಹೊರ ಬರುವಂತಿಲ್ಲ. ಇದೀಗ ರನ್ಯಾ ರಾವ್ ಕಾಫಿಪೋಸಾ ಅಂತ್ಯಗೊಂಡಿದ್ದು, ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

Must Read