ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ನ್ಯಾಯಾಧೀಶರಾದ ವಿಶ್ವನಾಥ್ ಸಿ ಗೌಡರ್ ಅವರಿಂದ ಆದೇಶ ನೀಡಿದೆ.

ಡಿಆರ್‌ಐ ಪರ ವಕೀಲರು ರನ್ಯಾಗೆ ಜಾಮೀನು ನೀಡಬಾರದು ಎಂದು ಪ್ರಬಲವಾಗಿ ವಾದ ಮಂಡಿಸಿದ್ದರು. ಈ ವಾದವನ್ನು ಕೋರ್ಟ್‌ ಪುರಸ್ಕರಿಸಿದೆ.
ನಟಿ ರನ್ಯಾ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಾಡಿದ್ದರು. ಡಿಆರ್‌ಐ‌ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಮಾಡಿಲ್ಲ. ಹೆಣ್ಣು ಎಂದೂ ನೋಡದೇ ರಾತ್ರಿಯಿಡೀ ತನಿಖೆ ಮಾಡಿ ಮಾನಸಿವಾಗಿ ಹಿಂಸೆ ನೀಡುವ ಕೆಲಸವಾಗಿದೆ. ಅರೆಸ್ಟ್ ಮೇಮೊ ಕೂಡ ಕೊಟ್ಟಿಲ್ಲ. ಈ ಪ್ರಕರಣದಲ್ಲಿ ರನ್ಯಾ ಪಾತ್ರ ಇಲ್ಲ‌. ತನಿಖೆಗೆ ಸಹಕಾರ‌ ನೀಡುತ್ತಿದ್ದು, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಮಾ.10 ರಂದು ಕೋರ್ಟ್‌ ರನ್ಯಾ ರಾವ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತ್ತು. ಹೀಗಾಗಿ ಮಾ.24 ರವರೆಗೆ ರನ್ಯಾ ರಾವ್‌ ಪರಪ್ಪನ ಅಗ್ರಹಾರದಲ್ಲೇ ಇರಲಿದ್ದಾಳೆ. ಮಾರ್ಚ್‌ 3 ರಂದು ರನ್ಯಾಳನ್ನು ವಶಕ್ಕೆ ಪಡೆದಿದ್ದ ಡಿಆರ್‌ಐ ಮಾರ್ಚ್‌ 4 ರಂದು ಬಂಧಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!