ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಅವರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸಿತು. ಬಳಿಕ ನಾಳೆಗೆ ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಲಾಗಿದೆ.